alex Certify BIG NEWS: ಗೋಕರ್ಣದಲ್ಲಿ ದುರಂತ; ಸಮುದ್ರದ ಅಲೆ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋಕರ್ಣದಲ್ಲಿ ದುರಂತ; ಸಮುದ್ರದ ಅಲೆ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ದುರ್ಮರಣ

ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಅಲೆಯ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಅಭಿಷೇಕ್ (29) ಮೃತ ಪ್ರವಾಸಿಗ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಭಿಷೇಕ್ ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಹೋಗಿದ್ದ.

ನಾಲ್ವರು ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ್ದ. ಈ ವೇಳೆ ಭಾರಿ ಗಾತ್ರದ ಅಲೆಯ ಹೊಡೆತಕ್ಕೆ ಸಿಲುಕಿದ ಅಭಿಷೇಕ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಾವನ್ನಪ್ಪಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...