alex Certify BIG NEWS: ಗೋವಾದಲ್ಲಿ ಅತಂತ್ರ ಸ್ಥಿತಿ ಸಾಧ್ಯತೆ; ತುರ್ತು ಸಭೆ ಕರೆದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋವಾದಲ್ಲಿ ಅತಂತ್ರ ಸ್ಥಿತಿ ಸಾಧ್ಯತೆ; ತುರ್ತು ಸಭೆ ಕರೆದ ಕಾಂಗ್ರೆಸ್

ಪಣಜಿ: ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಸಾಧ್ಯತೆ ಹೆಚ್ಚುರುವುದರಿಂದ ಕಾಂಗ್ರೆಸ್ ನಾಯಕರು ಮಧ್ಯಾಹ್ನ 1 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ.

ಗೋವಾ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಹಾವು – ಏಣಿ ಆಟ ಮುಂದುವರೆದಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತುರ್ತು ಸಭೆ ಕರೆದಿದೆ.

Big News: ಫಲಿತಾಂಶ ಹೊರ ಬೀಳುತ್ತಿರುವ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಇನ್ನೊಂದೆಡೆ ಕಾಂಗ್ರೆಸ್ ನ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಗೋವಾದ ಗ್ರೇಸ್ ಮೆಜೆಸ್ಟಿಕ್ ಹೋಟೆಲ್ ನಲ್ಲಿ ಕಾಂಗ್ರೆಸ್ ನ 40 ಅಭ್ಯರ್ಥಿಗಳನ್ನು ಇರಿಸಲಾಗಿದ್ದು, ಹೋಟೆಲ್ ಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ.

ಸಧ್ಯದ ಟ್ರೆಂಡ್ ಪ್ರಕಾರ ಗೋವಾದಲ್ಲಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 4 ಹಾಗೂ ಆಪ್ 1 ಇತರೆ 3 ಸ್ಥಾನ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...