ಕಾರವಾರ: ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತವುಂಟಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಬಿಣಗಾ ಗುಡ್ಡ ಕುಸಿದಿದೆ. ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವುಂಟಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ರಸ್ತೆ ಮಾರ್ಗ ಬಂದ್ ಆಗಿದ್ದು, ಜಿಲ್ಲಾಡಳಿತ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ.