ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಎಲ್ಲರೂ ತಮಿಳುನಾಡು ಮೂಲದವರಾಗಿದ್ದಾರೆ.
ಬೆಂಗಳೂರು ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ತಮಿಳುನಾಡಿನ ಸತ್ಯಮಂಗಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ತಮಿಳುನಾಡಿನಿಂದ ಮೈಸೂರು ಮಂಡಿಗಳಿಗೆ ಬಾಳೆ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ.
BREAKING: ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಹೊಸ ನೋಂದಣಿ ಸೀರಿಸ್ ಆರಂಭ – ವರ್ಗಾವಣೆ ಸುಲಭ
ಇನ್ನು ಆರೋಪಿಗಳ ಪತ್ತೆಗೆ ಪೊಲೀಸರಿಗೆ ಸಹಾಯವಾಗಿದ್ದು ಬಸ್ ಟಿಕೆಟ್. ಗ್ಯಾಂಗ್ ರೇಪ್ ನಡೆದಿದ್ದ ಸ್ಥಳದಲ್ಲಿ ಸಿಕ್ಕಿದ್ದ ಆ ಒಂದು ಬಸ್ ಟಿಕೆಟ್ ಆರೋಪಿಗಳ ಹೆಜ್ಜೆ ಗುರುತು ಬಯಲು ಮಾಡಿತ್ತು.
ಆಗಸ್ಟ್ 24ರಂದು ಸಂಜೆ ಮೈಸೂರಿನ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.