
ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಹಾಗೂ ಓರ್ವ ಆರೋಪಿಯನ್ನು ಮಹಾರಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮೈಸೂರು ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮೈಸೂರಿಗೆ ಕರೆ ತರಲಾಗುತ್ತಿದೆ. ಆರೋಪಿಗಳನ್ನು 24ಗಂಟೆಯಲ್ಲಿ ಕೋರ್ಟ್ ಗೆ ಹಾಜರುಪಡಿಸಬೇಕಾದ ಅಗತ್ಯವಿದೆ.
ಈ ಮೂವರು ನಟರ ಜತೆಗೆ ನಟಿಸುವುದು ಸಮಂತಾ ಅಕ್ಕಿನೇನಿಯ ಮಹದಾಸೆಯಂತೆ
ಇತ್ತ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪೋಷಕರೊಂದಿಗೆ ಮುಂಬೈ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಸಂತ್ರಸ್ತೆ ಹಾಗೂ ಪೋಷಕರು ಯಾರನ್ನು ಭೇಟಿಯಾಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಸಂತ್ರಸ್ತೆ ಪೋಷಕರು ನಿನ್ನೆ ಮ್ಮುಂಬೈನಿಂದ ಮೈಸೂರಿಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿ ಮುಂಬೈ ಮೂಲದವರಿರಬಹುದು ಎಂದು ಹೇಳಲಾಗುತ್ತಿದೆ. ಇಲ್ಲವೇ ಚಿಕಿತ್ಸೆ ಕಾರಣಕ್ಕಾಗಿ ಮುಂಬೈಗೆ ಕರೆದುಕೊಂಡು ಹೋಗಿರುವ ಸಾಧ್ಯತೆಯೂ ಇದೆ.