
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಟೀಕಾ ಪ್ರಹಾರ ಮುಂದುವರೆಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಸಚಿವ ಸುನೀಲ್ ಕುಮಾರ್ ಲೇವಡಿ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯ ದಾರಿ ಹಾಗೂ ದಾಟಿ ನೋಡಿದರೆ ಮುಂದಿನ ದಿನಗಳಲ್ಲಿ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳುವುದು ನಿಶ್ಚಿತ ಎಂದಿದ್ದಾರೆ.
ಬಿಜೆಪಿ ನಾಯಕತ್ವದ ವಿಚಾರವಾಗಿ ಮಾತನಾಡಿದ ಸುನೀಲ್ ಕುಮಾರ್, ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿ ನೇತೃತ್ವ ವಹಿಸಿಕೊಳ್ಳುವುದು ಅಗತ್ಯ ಎಂದು ಹೇಳಿದ್ದಾರೆ.