ತುಮಕೂರು: ಗ್ಯಾರೇಜ್ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ 7 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.
ಪ್ರಭಾರಿ ತಹಶೀಲ್ದಾರ್ ನಾಗಮಣಿ ನೇತೃತ್ವದಲ್ಲಿ ಅಧಿಕಾರಿಗಳು ಶಿರಾ ಗ್ಯಾರೇಜ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ 7 ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಭವನಕ್ಕೆ ಸ್ಥಳಾಂತರ ಮಾಡಿದ್ದಾರೆ.
ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಗ್ಯಾರೇಜ್ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.