ಬೆಳಗಾವಿ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಯೇ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಆಲಗೌಡ ಪಾಟೀಲ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆ ಬೆಂಕಿಗಾಹುತಿಯಾಗಿದೆ. ಸುತ್ತಮುತ್ತಲೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿಗಳು ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಯಮಕನಮರಡಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.