ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸೇಲಂ ನ ಕರುಂಗಳಪಟ್ಟಿ ಎಂಬಲ್ಲಿ ರಾಜಲಕ್ಷ್ಮಿ ಎಂಬುವವರು ಮನೆಯಲ್ಲಿ ಚಹಾ ಮಾಡಲೆಂದು ಸ್ಟವ್ ಆನ್ ಮಾಡುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡು ರಾಜಲಕ್ಷ್ಮಿ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಫೋಟದ ರಭಸಕ್ಕೆ ಮನೆ ಸಂಪೂರ್ಣ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಇಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಪರಿಣಾಮ ಅಕ್ಕ-ಪಕ್ಕದ ಮನೆಗಳಿಗೂ ಹಾನಿಯಾಗಿವೆ.