ಮಂಡ್ಯ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.
ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ, 5000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಕಾರ್ಯದರ್ಶಿವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.