BIG NEWS: ಗ್ರಾಮಸ್ಥರ ಕನಸು ನನಸು; ಇತಿಹಾಸದಲ್ಲೇ ಮೊದಲ ಬಾರಿಗೆ ಹೊಯ್ಸಳಲು ಗ್ರಾಮಕ್ಕೆ ಬಸ್ ಸೌಲಭ್ಯ ಆರಂಭ

ಚಿಕ್ಕಮಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳ ಗ್ರಾಮಗಳಲ್ಲಿ ಇಂದಿಗೂ ಕನಿಷ್ಟ ಮೂಲಭೂತ ಸೌಕರ್ಯ, ಸಾರಿಗೆ ಸಂಪರ್ಕ ವ್ಯವಸ್ಥೆ ಕೂಡ ಇಲ್ಲದ ಕುಗ್ರಾಮಗಳು ಇವೆ. ಚಿಕ್ಕಮಗಳೂರು ಜಿಲ್ಲೆಯ ಹೊಯ್ಸಳಲು ಗ್ರಾಮಕ್ಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಲ್ಲಿನ ಜನರ ದಶಕಗಳ ಕನಸು ನನಸಾಗಿದೆ.

ಬಸ್ ವ್ಯವಸ್ಥೆಗಾಗಿ ಗ್ರಾಮಸ್ಥರು ಹಲವು ವರ್ಷಗಳಿಂದ ಮಾಡಿದ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಗ್ರಾಮಕ್ಕೆ ಕೆ ಎಸ್ ಆರ್ ಟಿ ಸಿ ಕೆಂಪು ಬಸ್ ಬಿಡಲಾಗುತ್ತಿದೆ. ಗ್ರಾಮಕ್ಕೆ ಬಂದ ಬಸ್ ಕಂಡು ಗ್ರಾಮಸ್ಥರು ಖುಷಿಯಿಂದ ಸಂಭ್ರಮಿಸಿದ್ದಾರೆ. ಹೊಯ್ಸಳಲು ಗ್ರಾಮದ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಮೂಡಿಗೆರೆ ಕೆ ಎಸ್ ಆರ್ ಟಿ ಸಿ ಯಿಂದ ಹೊಯ್ಸಳಲು ಗ್ರಾಮಕ್ಕೆ ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಎರಡು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read