ಮಂಡ್ಯ: ಮಂಡ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸಗರಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜೂನ್ 1ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು. ಮೇ 30ರಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಲುವರಾಜು ಅವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ನಿಮ್ಮನ್ನೇ ಅಧ್ಯಕ್ಷರನ್ನಾಗಿ ಮಾಡುತ್ತೇವೆ ಎಂದು ನಂಬಿಸಿ ಮದ್ದೂರು ತಾಲೂಕಿನ ಬೆಸಗರಹಳ್ಳಿಯಿಂದ ಅಪಹರಿಸಿ ಮೈಸೂರಿಗೆ ಕರೆದೊಯ್ದು ಲಾಡ್ಜ್ ನಲ್ಲಿ ಕೂಡಿಟ್ಟಿದ್ದರು.
ಕಿಡ್ನಾಪ್ ಮಾಡಿ ಬಳಿಕ ಧಮ್ಕಿ ಹಾಕಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದರು. ಚುನಾವಣೆ ಬಳಿಕ ಬಿಟ್ಟು ಕಳುಹಿಸಿದ್ದರು. ಇದೀಗ ಈ ಪ್ರಕರಣ ಸಂಬಂಧ ಬೆಸಗರಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿ 7 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.