ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಇನ್ನಷ್ಟು ಬೆಲೆ ಏರಿಕೆ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೋಟೆಲ್ ತಿಂಡಿ-ಊಟದ ದರದಲ್ಲಿ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಸಿಲಿಂಡರ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ-ಊಟದ ದರವನ್ನು ಹೆಚ್ಚುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಇಂದು ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ಸಭೆ ಕರೆದಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಹೋಟೆಲ್ ಊಟ-ತಿಂಡಿ ಬೆಲೆ ಏರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ.
ಪ್ರತಿಯೊಂದು ತಿಂಡಿಯ ಬೆಲೆ 5ರಿಂದ 10 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ. ನಾರ್ಥ ಇಂಡಿಯನ್ ತಿಂಡಿಯ ಬೆಲೆ 10 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ನಗರದ ಎಲ್ಲಾ ಹೋಟೆಲ್ ಮಾಲೀಕರು ಭಾಗಿಯಾಗಲಿದ್ದಾರೆ. ಇನ್ಮುಂದೆ ಹೋಟೆಲ್ ತಿಂಡಿ, ಊಟ, ಟೀ, ಕಾಫಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.