ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ನಿನ್ನೆಯಷ್ಟೇ ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತಷ್ಟು ಬೆಲೆ ಏರಿಕೆ ಮಾಡಲು ಮುಂದಾಗಿದೆ ಎನ್ನಲಾಗಿದೆ.
ಕೇವಲ ಇನ್ನು 3 ತಿಂಗಳಲ್ಲಿ ಎಲ್.ಪಿ.ಜಿ. ಸಿಲಿಂಡರ್ ದರ 1000 ರೂಪಾಯಿ ಗಡಿ ದಾಟುವ ಸಾಧ್ಯತೆ ದಟ್ಟವಾಗಿದೆ ಎಂದು ಆಲ್ ಇಂಡಿಯಾ ಎಲ್.ಪಿ.ಜಿ. ಫೆಡರೇಷನ್ ರಾಜ್ಯ ಕಾರ್ಯದರ್ಶಿ ರಮೇಶ್ ಕುಮಾರ್ ಸುಳಿವು ನೀಡಿದ್ದಾರೆ.
ವಿಶ್ವ ತೆಂಗಿನಕಾಯಿ ದಿನ: ಇಲ್ಲಿದೆ ತೆಂಗಿನ ಕಾಯಿ ಕುರಿತ ಇಂಟ್ರಸ್ಟಿಂಗ್ ವಿಷಯ
ಚಳಿಗಾಲದಲ್ಲಿ ಯುರೋಪ್ ದೇಶಗಳಲ್ಲಿ ಗ್ಯಾಸ್ ಸಿಲಿಂಡರ್ ಬೇಡಿಕೆ ಹೆಚ್ಚುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್.ಪಿ.ಜಿ. ಬೇಡಿಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ದರ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಅಡುಗೆ ಅನಿಲ ದರ 25 ರೂಪಾಯಿ ದಿಢೀರ್ ಏರಿಕೆಯಾಗಿದೆ. ಈ ಮೂಲಕ ಕಳೆದ 15 ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದ್ದು, ಬೆಲೆ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಅಡುಗೆ ಅನಿಲ ಇನ್ನಷ್ಟು ದುಬಾರಿಯಾಗಲಿದೆ ಎಂಬ ಸುಳಿವು ನೀಡುತ್ತಿರುವುದು ಜನಸಾಮಾನ್ಯರನ್ನು ಕಂಗೆಡಿಸಿದೆ.