ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ರೈತರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಎರಡು ದಿನಗಳ ಹಿಂದೆ ನದಿಯಲ್ಲಿ ಅಳವಡಿಸಲಾಗಿದ್ದ ಪಂಪ್ ಸೆಟ್ ತೆಗೆಯಲೆಂದು ಹೋಗಿದ್ದ ರೈತ, ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು. ರೈತನಿಗಾಗಿ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿತ್ತು. ಇದೀಗ ರೈತನ ಮೃತದೇಹ ಪತ್ತೆಯಾಗಿದ್ದು, ನದಿಯಿಂದ ಹೊರತೆಗೆಯಲಾಗಿದೆ.
38 ವರ್ಷದ ಬಸಪ್ಪ ಹಿರಿಕಣ್ಣವರ ಮೃತ ರೈತ. ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ನಿವಾಸಿ ಎಂದು ತಿಳಿದುಬಂದಿದೆ.