ಬೆಂಗಳೂರು: ಬಿಜೆಪಿ ಹಾಗೂ ಆರ್.ಎಸ್.ಎಸ್. ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಬಿಜೆಪಿ, ನಿಮ್ಮ ತಪ್ಪು, ವೈರುಧ್ಯ, ಸಮಯಸಾಧಕತನವನ್ನು ಅನ್ಯರ ನಿಂದನೆ ಮೂಲಕ ಮುಚ್ಚಿಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದೆ.
ಘಾತುಕತನವನು ಬಿಡದೆ ನಿರಂತರ ಗೀತೆಯನೋದಿದೊಡೇನು ಫಲ? ಪುರಂದರ ದಾಸರ ಈ ಪದ್ಯದ ಸಾಲು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಕ್ಷರಶಃ ಅನ್ವಯವಾಗುತ್ತದೆ. ನಿಮ್ಮ ತಪ್ಪನ್ನು ಅನ್ಯರ ನಿಂದನೆ ಮೂಲಕ ಮುಚ್ಚಿಕೊಳ್ಳಲು ಸಾಧ್ಯವೇ? ಕಾಗೆ ಗಂಗಾ ಸ್ನಾನ ಮಾಡಿದರೆ ಬಿಳುಪಾಗುವುದೇ? ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ.
BIG NEWS: ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ವಿರುದ್ಧ ACBಗೆ ದೂರು
’ವೃದ್ಧನಾರಿ ಪತಿವ್ರತಾ’ ಎಂಬ ಮಾತು ಗೊತ್ತೇ? ನಿಮ್ಮ ಸ್ಥಿತಿಯೂ ಹಾಗಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಗುಟ್ಟಿನಲ್ಲಿ ತಪ್ಪು ಮಾಡುವುದು ಬಳಿಕ ಗರತಿಯ ಸೋಗು ಹಾಕುವುದು ನಿಮ್ಮ ಹಳೇ ಚಾಳಿ. ಕೆಪಿಎಸ್ಸಿ ಕರ್ಮಕಾಂಡದ ರೂವಾರಿಯಾಗಿರುವ ನೀವು ಈಗ ಊರಿಗೆ ಉಪದೇಶ ಕೊಡುವಂತಾಗಿರುವುದೇ ಕಾಲದ ಚೋದ್ಯ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ.
ಸಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ತಮಗೆ ಬೇಕಾದವರಿಗೆ ಸರ್ಕಾರಿ ಹುದ್ದೆ ಕೊಡಿಸಿದ್ದು ಕನ್ನಡಿಗರಿಗೆ ಮಾಡಿದ ಮೋಸವಲ್ಲವೇ? ತಮಗೆ ಬೇಕಾದ ವ್ಯಕ್ತಿಯ ಕುಟುಂಬದವರಿಗೆ ಹೆಚ್.ಎನ್.ಕೃಷ್ಣ ಮೂಲಕ ಕ್ಲಾಸ್ ಒನ್ ಅಧಿಕಾರಿ ಹುದ್ದೆ ಕೊಡಿಸಿದ್ದೆ ಎಂಬ ನಿಮ್ಮ ಹೇಳಿಕೆಗೆ ರಾಜ್ಯ ಸಾಕ್ಷಿಯಿದೆ. ಹಾಗಾದರೆ ಸಂವಿಧಾನಬದ್ಧ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಯಾರು? ಕುಮಾರಸ್ವಾಮಿಯೋ? ಅಥವಾ ಸಾಮಾಜಿಕ ಸಂಘಟನೆಯೋ? ಎಂದು ಪ್ರಶ್ನಿಸಿದೆ.
ನೆಲಕ್ಕೆ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಪ್ರಾಣಬಿಟ್ಟ ನಟಿ
ಉಪ್ಪಿಲ್ಲದಿರುವಾಗ ಸೊಪ್ಪಿನ ಚಿಂತೆ, ಸೊಪ್ಪು ಸಿಕ್ಕಾಗ ಉಪ್ಪರಿಗೆ ಚಿಂತೆ, ಉಪ್ಪರಿಗೆ ಸಿಕ್ಕಾಗ ಕೊಪ್ಪರಿಗೆ ಚಿಂತೆ.. ಮಾಜಿ ಸಿಎಂ ಕುಮಾರಸ್ವಾಮಿಯವರಿಗಾಗಿಯೇ ಬರೆದಂತಿದೆ ಈ ಕವಿವಾಕ್ಯ. ಸದಾ ವೈರುಧ್ಯದ ಗಣಿಯಂತಿರುವ ಕುಮಾರಸ್ವಾಮಿಯವರೇ, ಬಿಡುವಿನ ಸಂದರ್ಭದಲ್ಲಿ ಆತ್ಮಶೋಧಕ್ಕೂ ಒಂದಿಷ್ಟು ಸಮಯ ಮೀಸಲಿಡಿ ಎಂದು ಬಿಜೆಪಿ ಕಿವಿಮಾತು ಹೇಳಿದೆ.