ಕಾರವಾರ: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಕರಾವಳಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ಬೃಹತ್ ಅಲೆಗಳು ಏಳುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬೀಚ್ ನಲ್ಲಿ ಕಡಲ್ಕೊರೆತವುಂಟಾಗಿದೆ. ಮೀನುಗಾರರು ದೋಣಿಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಸಮುದ್ರದ ತೀರ ಪ್ರದೇಶಗಳಲ್ಲಿ ಹಲವೆಡೆ ಭಾರಿ ಕಡಲ್ಕೊರೆತವುಂಟಾಗುತ್ತಿದ್ದು, ಮನೆ, ಕಟ್ಟಗಳು ಕುಸಿದು ಬಿದ್ದಿವೆ. ಇನ್ನೂ ಎರಡು ದಿನಗಳ ಕಾಲ ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಆಗಲಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.