alex Certify BIG NEWS: ಚಂಡಮಾರುತದ ರಣಾರ್ಭಟಕ್ಕೆ ರಾಜ್ಯದ ‘ಕರಾವಳಿ’ಯಲ್ಲಿಯೂ ಅಬ್ಬರಿಸಿದ ಭಾರಿ ಅಲೆಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಂಡಮಾರುತದ ರಣಾರ್ಭಟಕ್ಕೆ ರಾಜ್ಯದ ‘ಕರಾವಳಿ’ಯಲ್ಲಿಯೂ ಅಬ್ಬರಿಸಿದ ಭಾರಿ ಅಲೆಗಳು

ಮಂಗಳೂರು: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಕರ್ನಾಟಕದ ಕಡಲ ತೀರಕ್ಕೂ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು, ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರದ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಜೋರಾಗಿದ್ದು, ಕಟ್ಟಡಗಳು, ಮನೆಗಳಿಗೆ ಗಜಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಗೋಕರ್ಣ ಕಡಲ ತೀರದಲ್ಲಿಯೂ ಸಮುದ್ರದ ಅಲೆಗಳು ಹೆಚ್ಚುತ್ತಿದ್ದು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...