alex Certify BIG NEWS: ಚನ್ನಪಟ್ಟಣ ನಗರಸಭೆಯಲ್ಲಿ ಹೈಡ್ರಾಮ; HDK ಎದುರೇ ಬಿಜೆಪಿ – ಕೈ ಕಾರ್ಯಕರ್ತರಿಂದ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟ್ಟಣ ನಗರಸಭೆಯಲ್ಲಿ ಹೈಡ್ರಾಮ; HDK ಎದುರೇ ಬಿಜೆಪಿ – ಕೈ ಕಾರ್ಯಕರ್ತರಿಂದ ಪ್ರತಿಭಟನೆ

ರಾಮನಗರ ಜಿಲ್ಲೆ ಚನ್ನಪಟ್ಟಣ ನಗರಸಭೆಯಲ್ಲಿ ಇಂದು ಹೈಡ್ರಾಮ ನಡೆದಿದ್ದು, ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಎದುರೇ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸ್ವಚ್ಛತಾ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಜೆಡಿಎಸ್ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವುದು ವಿಶೇಷ. ಒಂದು ಹಂತದಲ್ಲಿ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರೂ ಅವರ ಆಕ್ರೋಶ ಕಡಿಮೆಯಾಗಿರಲಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...