alex Certify BIG NEWS: ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸುವುದು ಕಷ್ಟ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸುವುದು ಕಷ್ಟ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಅಡ್ಡಕಸಬಿ ಬಜೆಟ್ ಎಂದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇದು ಸಿದ್ದರಾಮಯ್ಯ ಅವರ ಭಂಡತನ, ಮೊಂಡುತನಕ್ಕೆ ಸಾಕ್ಷಿ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದರೆ ಅವರು ಮಂಡಿಸಿದ್ದು ಕೂಡ ಬಡಾಯಿ ಬಜೆಟ್ ಆಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಇಂತಹ ಹೇಳಿಕೆಗಳು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಅಧಿಕಾರಕ್ಕೆ ಬರಬೇಕು ಎಂಬ ದುರುದ್ದೇಶಕ್ಕೆ ಕೇವಲವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಇದೇ ವೇಳೆ 1 ಲಕ್ಷ ರೂಪಾಯಿ ಪಡೆದು ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದದ್ದು, ಬೇರೆ ವಿಚಾರಕ್ಕೆ ರಾಜಕೀಯ ಮಾಡಲಿ ಆದರೆ ಯುದ್ಧದಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡುವ ಏರ್ ಲಿಫ್ಟ್ ಕಾರ್ಯಕ್ಕೆ ಮಾತನಾಡುವುದು ಸೂಕ್ತವಲ್ಲ. ರಾಜಕಾರಣಿಗಳು ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ. ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...