alex Certify BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದ ಘಟನೆ ಅತ್ತಿಬೆಲೆ ಫ್ಲೈಓವರ್ ಮೇಲೆ ನಡೆದಿದೆ.

ಬೆಂಗಳೂರು-ಹೊಸು ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದೆ. ಅತ್ತಿಬೆಲೆ ಫ್ಲೈಓವರ್ ಮೇಲೆ ಬರುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರನ್ನು ರಸ್ತೆಬದಿಗೆ ನಿಲ್ಲಿಸಿದ ಕಾರು ಚಾಲಕ ಕಾರಿನಿಂದ ಇಳಿದಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಸುಟ್ಟುಭಸ್ಮವಾಗಿದೆ.

ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದಾರೆ. ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...