alex Certify BIG NEWS: ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದ ಬಾಲಕ; ಆಘಾತಕಾರಿ ದೃಶ್ಯದ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದ ಬಾಲಕ; ಆಘಾತಕಾರಿ ದೃಶ್ಯದ ವಿಡಿಯೋ ವೈರಲ್

ಕಿಕ್ಕಿರಿದು ತುಂಬಿದ್ದ ಬಸ್ ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ಶಾಲಾ ಬಾಲಕನೊಬ್ಬ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ಆಘಾತಕಾರಿ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಈ ಬಸ್ ಒಳಗೆ ಜನ ತುಂಬಿ ತುಳುಕುತ್ತಿದ್ದ ಕಾರಣ ಬಹುತೇಕ ವಿದ್ಯಾರ್ಥಿಗಳು ಫುಟ್ ಬೋರ್ಡ್ ಮೇಲೆ ನೇತಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ವಿದ್ಯಾರ್ಥಿ ಗ್ರಿಪ್ ಕಳೆದುಕೊಂಡು ಆಯತಪ್ಪಿದ್ದು ಕೆಳಗೆ ಬಿದ್ದಿದ್ದಾನೆ.

ಈ ದೃಶ್ಯವನ್ನು ಬಸ್ ಹಿಂದಿನಿಂದ ಬರುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಹಿಡಿದಿದ್ದು, ಅದೃಷ್ಟವಶಾತ್ ಕೆಳಗೆ ಬಿದ್ದಿದ್ದ ಬಾಲಕ ಸಾವರಿಸಿಕೊಂಡು ಮೇಲೆ ಎದ್ದಿದ್ದಾನೆ. ಈತನಿಗೆ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...