ಬೆಂಗಳೂರು: ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡಲು ವಿಚಾರಣಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 23 ರೋಗಿಗಳ ಸಾವು ಪ್ರಕರಣದ ಕುರಿತು ನಿಖರ ಮಾಹಿತಿ ಪತ್ತೆ ಹಚ್ಚಿ 3 ದಿನಗಳ ಒಳಗೆ ವರದಿ ನೀಡುವಂತೆ ಆದೇಶ ನೀಡಿದೆ.
ಚಾಮರಾಜನಗರ ದುರಂತ; ತನಿಖೆ ನಡೆಸಿ ವರದಿ ನೀಡಿ; ಪೊಲೀಸ್ ಮಾಹಾನಿರ್ದೇಶಕರಿಗೆ ಗೃಹ ಸಚಿವರ ಸೂಚನೆ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 23 ರೋಗಿಗಳು ಸಾವನ್ನಪ್ಪಿದ್ದರು. ಮೃತರಲ್ಲಿ ಬಹುತೇಕರು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಚಾರಣಾಧಿಕಾರಿಯನ್ನು ನೇಮಕ ಮಾಡಿದೆ.