ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಮಾಡಿಕೊಡುವಂತೆ ನಾಗರಿಕರ ಒಕ್ಕೂಟ ಪಟ್ಟು ಹಿಡಿದಿದೆ.
ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಕ್ಕೆ ಮಾತ್ರ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಆದರೆ ಕನ್ನಡ ರಾಜ್ಯೋತ್ಸವಕ್ಕೂ ಮೈದಾನದಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್ ಜೊತೆ ಮಾತುಕತೆ ನಡೆಸಿದ್ದು, ನಮ್ಮ ಮನವಿ ಸಲ್ಲಿಸಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ ನಿಂದ ರಾಜ್ಯೋತ್ಸವ ಆಚರಿಸಲು ಅವರು ಸಲಹೆ ನೀಡಿದ್ದಾರೆ. ಅದಕ್ಕೆ ನಮ್ಮ ಸಮ್ಮತಿ ಇದೆ. ನಾಡ ಹಬ್ಬದ ರೀತಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಚಾಮರಾಜಪೇಟೆ ಮೈದಾನದಲ್ಲಿ ಆಚರಿಸಲು ಅವಕಾಶ ಕೊಡಬೇಕು. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯೇ ಕೋರ್ಟ್ ಗೆ ಮನವಿ ಮಾಡಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ, ಈ ಹಿನ್ನಲೆಯಲ್ಲಿ ಸರ್ಕಾರ ಕೋರ್ಟ್ ನಿಂದ ಅನುಮತಿ ಪಡೆಯುವ ಸಾಧ್ಯತೆ ಇದೆ.