ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ವೀಕ್ಷಣಾ ಗೋಪುರದ ಪಕ್ಕದಲ್ಲಿಯೇ ನಂದಿ ಮಾರ್ಗದಲ್ಲಿ ರಸ್ತೆ ಕುಸಿದಿದೆ. ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಮೈಸೂರಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರದಿಂದಾಗಿ ಭೂ ಕುಸಿತವುಂಟಾಗುತ್ತಿದೆ.
ಕಳೆದ ಕೆಲ ದಿನಗಳ ಹಿಂದೆ ವರುಣಾರ್ಭಟದಿಂದಾಗಿ ಇದೇ ಮಾರ್ಗದಲ್ಲಿ ರಸ್ತೆ ಕುಸಿದಿತ್ತು. ಒಂದು ಕಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮತ್ತೊಂದು ಕಡೆ ಭೂ ಕುಸಿತವುಂಟಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.