ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಸಿದ್ದಪ್ಪ ಹಾಗೂ ಸೀಮಾ ಕೊಣ್ಣೂರ್ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ದಂಪತಿ ಬೆಳಗಾವಿಯಿಂದ ಧೂಪದಾಳಕ್ಕೆ ಕೆಲಸದ ನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸಧ್ಯ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರನ್ನು ಕ್ರೇನ್ ಮೂಲಕ ಮೇಲಕೆತ್ತಲಾಗಿದೆ. ಅಂಕಲಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.