ಚಿಕ್ಕಮಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಖಾಸಗಿ ಶಾಲೆಯಲ್ಲಿ ಕೋವಿಡ್ ಸ್ಫೋಟಗೊಂಡಿದೆ.
ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಲಾಗಿದೆ.
ವಾರದ ಹಿಂದೆ ಇಲ್ಲಿನ ನವೋದಯ ಶಾಲೆಯ ನೂರಕ್ಕು ಹೆಚ್ಚು ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಜೀವನ್ ಜ್ಯೋತಿ ಶಾಲೆಯಲ್ಲಿ ಕೊರೊನಾ ಸೋಂಕು ಹರಡಿದ್ದು, ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.