alex Certify BIG NEWS: ಚಿತ್ರ ಮಂದಿರಗಳಿಗೆ ಬಿಗ್ ರಿಲೀಫ್; ನಾಳೆಯಿಂದಲೇ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿತ್ರ ಮಂದಿರಗಳಿಗೆ ಬಿಗ್ ರಿಲೀಫ್; ನಾಳೆಯಿಂದಲೇ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ

ಬೆಂಗಳೂರು: ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಕೋವಿಡ್ ನಿಯಮಗಳಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ಎಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ, ಥಿಯೇಟರ್ ಒಳಗೆ ತಿಂಡಿ, ತಿನಿಸುಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದರು.

ನಾಳೆಯಿಂದಲೇ ಚಿತ್ರಮಂದಿರ, ಜಿಮ್, ಈಜುಕೊಳಗಳಿಗೆ ಶೇ.100 ರಷ್ಟು ಅನುಮತಿ ನೀಡಲಾಗಿದೆ. ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು. ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮುಖ್ಯ ಎಂದರು.

ಉಳಿದಂತೆ ಮದುವೆ, ಸಭೆ, ಸಮಾರಂಭಗಳಿಗೆ ಹಳೇ ಮಾರ್ಗಸೂಚಿಯೇ ಮುಂದುವರೆಯಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...