ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ತೆರಿಗೆ ಇಲಾಖೆ ಅಧಿಕಾರಿಗಳು ಚಿನ್ನದ ಮಳಿಗೆಗಳು, ಚಿನ್ನದಂಗಡಿ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಯನಗರ, ಬಸವನಗುಡಿ, ಯಶವಂತಪುರ, ಸಂಜಯನಗರ, ಜೆಪಿ ನಗರ, ಆರ್ ಆರ್ ನಗರ ಸೇರಿದಂತೆ ಹಲವೆಡೆ 300 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.