ಬೆಂಗಳೂರು: ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಲುಮೆ ಸಂಸ್ಥೆಯ ಕಚೇರಿಯಲ್ಲಿ ಹಣದ ವ್ಯವಹಾರ ನಡೆದಿದೆ. ಸಂಸ್ಥೆಯಲ್ಲಿ ನೋಟ್ ಕೌಂಟಿಂಗ್ ಮಷಿನ್ ಪತ್ತೆಯಾಗಿದೆ. ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿ ಸರ್ಕಾರ ಮತದಾರರ ಹಕ್ಕು ಕಿತ್ತುಕೊಳ್ಳುತ್ತಿದೆ. ಬಹುದೊಡ್ಡ ಹಗರಣವೆ ನಡೆದಿದೆ. ಈ ಬಗ್ಗೆ ಇಂದು ಮಧ್ಯಾಹ್ನ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ. ಮೂರು ಗಂಟೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಾನು ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದೇವೆ ಎಂದು ಹೇಳಿದರು.