ಬೀಜಿಂಗ್: ಚೀನಾದಲ್ಲಿ ಮತ್ತೆ ಕೋವಿಡ್ ಮಹಾಮಾರಿ ಅಟ್ಟಹಾಸ ಮುಂದುವರೆದಿದೆ. ಚಿಕಿತ್ಸೆಗಾಗಿ ಜನರು ಆಸ್ಪತ್ರೆಗಳ ಮುಂದೆ ಕ್ಯೂ ನಿಂತಿದ್ದಾರೆ. ಚೀನಾ, ಅಮೆರಿಕಾ, ಕೊರಿಯಾ, ಬ್ರೆಜಿಲ್ ದೇಶಗಳಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಕೇಂದ್ರ ಆರೋಗ್ಯ ಇಲಾಖೆ ಹೊಸ ಅಧಿಸೂಚನೆ ಹೊರಡಿಸಿದ್ದು, ಕೋವಿಡ್ ತಪಾಸಣೆ ವೇಳೆ ಪಾಸಿಟಿವ್ ಬಂದರೆ ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಗರಿಷ್ಠ ಪ್ರಮಾಣದಲ್ಲಿ ಇನ್ಸಾಕಾಗ್ ಪ್ರಯೋಗಾಲಯಗಳಿಗೆ ಕಳುಹಿಸಬೇಕು. ಈ ಮೂಲಕ ಹೊಸ ರೂಪಾಂತರಿ ಪತ್ತೆಗೆ ಸಹಕರಿಸಬೇಕು ಎಂದು ಸೂಚಿಸಿದೆ.
ಚೀನಾ ಸೇರಿದಂತೆ ವಿವಿಧ ದೇಶಗಳ ಕೋವಿಡ್ ಸೋಂಕು ಪ್ರಕರಣಗಳ ಅಂಕಿ-ಅಂಶಗಳನ್ನು, ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರ ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಭಾರತದ ಮೇಲೆ ಪರಿಣಾಮ ಹಾಗೂ ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಹಾಗೂ ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸೂಚಿಸಲಾಗಿದೆ.