alex Certify BIG NEWS: ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿ 9 ಜನರಲ್ಲಿ ಕೊರೊನಾ ಸೋಂಕು; ಬೆಂಗಳೂರಿನಲ್ಲಿ ಹೆಚ್ಚಿದ BF.7 ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿ 9 ಜನರಲ್ಲಿ ಕೊರೊನಾ ಸೋಂಕು; ಬೆಂಗಳೂರಿನಲ್ಲಿ ಹೆಚ್ಚಿದ BF.7 ಆತಂಕ

ಬೆಂಗಳೂರು: ಚೀನಾದಿಂದ ಬೆಂಗಳೂರಿಗೆ ಆಗಮಿಸಿರುವ ವ್ಯಕ್ತಿ ಸೇರಿದಂತೆ 9 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ BF.7 ಆತಂಕ ಹೆಚ್ಚಾಗಿದೆ.

ಬೆಳಗಾವಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಏರ್ ಪೋರ್ಟ್ ಗೆ ಬಂದಿದ್ದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇದೀಗ 9 ಜನರಲ್ಲಿ ಪಾಸಿಟಿವ್ ಬಂದಿದೆ.

ಚೀನಾದಿಂದ ಆಗಮಿಸಿರುವ 35 ವರ್ಷದ ವ್ಯಕ್ತಿ ಹಾಗೂ ಆಗ್ರಾದಿಂದ ಬಂದಿರುವ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ವರು ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸೋಲೇಟ್ ಮಾಡಲಾಗಿದೆ. ಜಿನೊವಿಕ್ ಸೀಕ್ವೆನ್ಸ್ ವರದಿಗೆ ಕಾಯಲಾಗುತ್ತಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...