ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕಕ್ಕೆ ಬಂದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕೈ ಕೈ ಹಿಡಿಸಿ ಎತ್ತುವ ಮೂಲಕ ಒಗ್ಗಟ್ಟಿನ ಸಂದೇಶ ಸಾರುವ ಪ್ರಯತ್ನ ಮಾಡಿದ್ದರು. ಈ ಮೂಲಕ ಕಾಂಗ್ರೆಸ್ಸಿನಲ್ಲಿ ಯಾವುದೇ ಬಣಗಳಿಲ್ಲ ಎಂಬುದನ್ನು ಪ್ರತಿಪಾದಿಸಲು ಯತ್ನಿಸಿದ್ದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದ ವೇಳೆ ಅವರನ್ನು ಕೆಪಿಸಿಸಿ ವತಿಯಿಂದ ಸನ್ಮಾನಿಸಿದ ಸಂದರ್ಭದಲ್ಲಿಯೂ ಸಹ ಖರ್ಗೆಯವರು ಕಾಂಗ್ರೆಸ್ ನ ಎಲ್ಲ ನಾಯಕರು ಒಟ್ಟಾಗಿ ಸಾಗಬೇಕೆಂದು ಸೂಚಿಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂದರೆ ಇದು ಅತ್ಯಗತ್ಯ ಎಂಬುದನ್ನು ಖರ್ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು.
ಇದಾದ ಬಳಿಕ ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊರಟಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ದಕ್ಷಿಣದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ತಂಡ ಉತ್ತರದ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಸ್ ಯಾತ್ರೆ ನಡೆಸಲು ತೀರ್ಮಾನಿಸಲಾಗಿತ್ತು. ಇದಕ್ಕಾಗಿ ಇಬ್ಬರು ನಾಯಕರಿಗೂ ಪ್ರತ್ಯೇಕ ಹೈಟೆಕ್ ಬಸ್ ವ್ಯವಸ್ಥೆ ಮಾಡಲಾಗಿತ್ತು.