ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ಮಾಜಿ ಸಚಿವ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ರಮಾನಾಥ್ ರೈ, ಸೋತರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ರಾಜ್ಯದ ಜನತೆ ಮತ ಕೊಟ್ಟಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಸಣ್ಣ ಹಿನ್ನಡೆಯಾಗಿದೆ ಎಂದರು.
ನನ್ನ ಸೋಲಿನ ಅವಲೋಕನ ಮಾಡಿದ್ದೇನೆ. ಮುಂದೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ಮುಖ್ಯಮಂತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಬಿಜೆಪಿ ಸ್ಪಷ್ಟ ಬಹುಮತಗಳಿಂದ ಯಾವತ್ತೂ ಸರ್ಕಾರ ರಚನೆ ಮಾಡಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಸಿಎಂ ಪ್ರಮಾಣವಚನ ಸ್ವೀಕಾರದ ಬಳಿಕ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತದೆ ಎಂದು ಹೇಳಿದರು.