ನೀತಿ ಆಯೋಗದ ಸದಸ್ಯ ಹಾಗೂ ಭಾರತದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ. ಪೌಲ್ ದೇಶದ ಪ್ರಸ್ತುತ ಕೋವಿಡ್ ಪರಿಸ್ಥಿತಿಯ ದೊಡ್ಡ ದೊಡ್ಡ ರ್ಯಾಲಿಗಳು ಹಾಗೂ ರೋಡ್ ಶೋಗಳಿಗೆ ಪೂರಕವಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಪಕ್ಷಗಳು ಸ್ವಯಂಪ್ರೇರಿತರಾಗಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳು ಹಾಗೂ ರೋಡ್ ಶೋಗಳನ್ನು ನಿಲ್ಲಿಸಬೇಕು ಎಂದು ಆಯೋಗವು ಅಭಿಪ್ರಾಯಪಟ್ಟಿದೆ.
ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಗೆ ಉತ್ತಮ ಸಿದ್ಧತೆ ನಡೆಸುವಂತೆ ಹಾಗೂ ಈ ರಾಜ್ಯಗಳಲ್ಲಿ ಲಸಿಕೆಯ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಈ ಹಿಂದೆ ಚುನಾವಣಾ ಆಯೋಗವು ಹೇಳಿತ್ತು. ಆದರೆ ವೇಗವಾಗಿ ಹರಡುತ್ತಿರುವ ಓಮಿಕ್ರಾನ್ ಪ್ರಕರಣದ ತೀವ್ರತೆಯನ್ನು ನೋಡಿದರೆ ಈ ರೂಪಾಂತರವು ಈ ಸಮಯದಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಪ್ರಶ್ನಿಸುವಂತಿದೆ.