ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಹಂಚಿಕೆ ಸಮಿತಿ ರಚನೆ ಮಾಡಿದೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕಮಿಟಿಯಲ್ಲಿ ಸ್ಥಾನ ನೀಡದೇ ಕೆ.ಹೆಚ್. ಮುನಿಯಪ್ಪಗೆ ಮಣೆ ಹಾಕಲಾಗಿದೆ.
36 ಜನರನ್ನೊಳಗೊಂಡ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆಯಾಗಿದ್ದು, ಸಮಿತಿಯಲ್ಲಿ ರಮೇಶ್ ಕುಮಾರ್ ಹೆಸರು ಕೈಬಿಡಲಾಗಿದೆ. ಕೆ.ಹೆಚ್. ಮುನಿಯಪ್ಪ ಅವರಿಗೆ ಸ್ಥಾನ ನೀಡಲಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಮುನಿಯಪ್ಪ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಕೆ.ಹೆಚ್. ಮುನಿಯಪ್ಪ ಮತ್ತಷ್ಟು ಪ್ರಭಾವಶಾಲಿಯಾಗಿದ್ದು, ರಮೇಶ್ ಕುಮಾರ್ ಅವರನ್ನು ಕಡೆಗಣಿಸಿ ಅವರಿಗಿಂತ ಕಿರಿಯರಿಗೆ ಎಲೆಕ್ಷನ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ.