ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಕಿಡಿಕಾರಿರುವ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್ ಚುನಾವಣೆಗೆ ಮೊದಲೇ ಆತ್ಮವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಬಿಎಂಪಿ ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ. ಆದರೆ ಕಾಂಗ್ರೆಸ್ ಆತ್ಮವಿಶ್ವಾಸ ಕಳೆದುಕೊಂಡಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬುದು ಅವರ ಪ್ರತಿಭಟನೆಯಿಂದ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಕಾನೂನು ಪ್ರಕಾರ ಬಿಬಿಎಂಪಿ ಮೀಸಲಾತಿ ನೀಡಿದೆ. ಕಾಂಗ್ರೆಸ್ ನಾಯಕರ ವಿರೋಧ ಹಾಸ್ಯಾಸ್ಪದ. ಚುನಾವಣೆಗೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದು ತಿರುಗೇಟು ನೀಡಿದರು.