alex Certify BIG NEWS: ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ತೀವ್ರ ಮುಜುಗರ; ಸಿಎಂ ಅಭ್ಯರ್ಥಿ ಹೆಸರು ಘೋಷಿಸುವಂತೆ ವೇದಿಕೆಯಲ್ಲಿಯೇ ಒತ್ತಾಯಿಸಿದ ಚರಣ್ ಜಿತ್ ಸಿಂಗ್ ಚೆನ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ತೀವ್ರ ಮುಜುಗರ; ಸಿಎಂ ಅಭ್ಯರ್ಥಿ ಹೆಸರು ಘೋಷಿಸುವಂತೆ ವೇದಿಕೆಯಲ್ಲಿಯೇ ಒತ್ತಾಯಿಸಿದ ಚರಣ್ ಜಿತ್ ಸಿಂಗ್ ಚೆನ್ನಿ

ಚಂಡೀಗಢ : ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಇದಕ್ಕಾಗಿ ಎಲ್ಲ ರಾಜ್ಯಗಳಲ್ಲಿ ಪ್ರತಿಯೊಂದು ಪಕ್ಷಗಳು ಕೂಡ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಕಾಂಗ್ರೆಸ್ ಗೆ ಪಂಜಾಬ್ ಪ್ರತಿಷ್ಠೆಯ ರಾಜ್ಯವಾಗಿದೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಚಟುವಟಿಕೆಗಳು ಗರಿಗೆದರಿವೆ,

ಕಾಂಗ್ರೆಸ್ ನ ಹೈಕಮಾಂಡ್ ಕೂಡ ಪಂಜಾಬ್ ನಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರಲು ಹರಸಾಹಸ ಪಡುತ್ತಿದೆ. ಹೀಗಾಗಿ ನಾಯಕರೆಲ್ಲ ಪಂಜಾಬ್ ನತ್ತ ಮುಖ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾಯಕ ರಾಹುಲ್ ಗಾಂಧಿ ಕೂಡ ಪಂಜಾಬ್ ಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಸಿಎಂ ಅಭ್ಯರ್ಥಿ ಘೋಷಿಸುವಂತೆ ಸಿಎಂ ಚರಣ್ ಜಿತ್ ಸಿಂಗ್ ಚೆನ್ನಿ ಅವರು ವೇದಿಕೆಯಲ್ಲಿಯೇ ಒತ್ತಾಯಿಸಿರುವ ಘಟನೆ ನಡೆದಿದೆ.

ಪಂಜಾಬ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶ ನಡೆದಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗವಹಿಸಿದ್ದರು. ನವಜೋತ್ ಸಿಂಗ್ ಸಿಧು ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಯಕರೆಲ್ಲ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಆಗ ಪಂಜಾಬ್ ಸಿಎಂ ಚನ್ನಿ ಅವರು ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಅವರನ್ನು ವೇದಿಕೆ ಮೇಲೆಯೇ ಸಿಎಂ ಅಭ್ಯರ್ಥಿ ಹೆಸರು ಘೋಷಿಸುವಂತೆ ಒತ್ತಡ ಹಾಕಿದರು. ನೀವು ಈ ಸಂದರ್ಭದಲ್ಲಿ ಘೋಷಣೆ ಮಾಡಿದರೆ ನಾವು ಒಗ್ಗಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ನಂತರ ಮಾತನಾಡಿದ ರಾಹುಲ್ ಗಾಂಧಿ, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರ ಪಂಜಾಬ್ ನ ಸಿಎಂ ಅಭ್ಯರ್ಥಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...