ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲ ಹೊತ್ತಲ್ಲೇ ಘೋಷಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಜ್ಜಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆ ಮುಕ್ತ ಹಾಗೂ ಪಾರದರ್ಶಕವಾಗಿ ನಡೆಯಬೇಕು. ಚುನಾವಣೆ ವೇಳೆ ನಡೆಯುವ ಅಕ್ರಮ ತಡೆಯಬೇಕು. ಆಡಳಿತ ಪಕ್ಷ ಸೇರಿ ಯಾರೇ ಅಕ್ರಮ ನಡೆಸಿದರೂ ಕ್ರಮ ಕೈಗೊಳ್ಳಬೇಕು ಎಂದರು.
ಆಡಳಿತ ಪಕ್ಷದವರು ಪ್ರಭಾವ ಬೀರುವ ಸಾಧ್ಯತೆ ಇದೆ. ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.