alex Certify BIG NEWS: ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧರಾದ ಸಿಎಂ; ಶ್ರೀಕಂಠೇಶ್ವರನಿಗೆ ಸಾಷ್ಠಾಂಗ ನಮಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧರಾದ ಸಿಎಂ; ಶ್ರೀಕಂಠೇಶ್ವರನಿಗೆ ಸಾಷ್ಠಾಂಗ ನಮಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಕೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಮಂಡನೆ ಮಾಡಲಿದ್ದು, ಇದಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವರಿಗೆ ಶಿರಸಾಷ್ಠಾಂಗ ನಮಸ್ಕಾರ ಮಾಡಿದರು.

ಚೊಚ್ಚಲ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಮುಂಜಾನೆಯಿಂದಲೇ ಟೆಂಪಲ್ ರನ್ ಆರಂಭಿಸಿದ್ದು, ಸಮಸ್ತ ರಾಜ್ಯದ ಜನತೆ ಹೆಸರಲ್ಲಿ ಶ್ರೀಕಂಠೇಶ್ವರನಿಗೆ ಅರ್ಚನೆ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಸುಖ-ಶಾಂತಿ-ನೆಮ್ಮದಿಯನ್ನು ಕರುಣಿಸುವಂತೆ ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...