ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಟ್ಟರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದೆ.
ಈಗಾಗಲೇ ಕಾಂಗ್ರೆಸ್ ರಾಜ್ಯ ನಾಯಕರು, ಕೇಂದ್ರ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಜಗದೀಶ್ ಶೆಟ್ಟರ್ ಗೆ ಪಕ್ಷಕ್ಕೆ ಬರುವಂತೆ ಖುದ್ದು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆ ನಡುವೆಯೇ ಬಿಜೆಪಿಗೆ ರಾಜೀನಾಮೆ ಬಳಿಕ ಶೆಟ್ಟರ್ ಹುಬ್ಬಳ್ಳಿಗೆ ತೆರಳಿದ್ದು, ಹುಬ್ಬಳ್ಳಿಯಿಂದ ಅವರನ್ನು ಬೆಂಗಳೂರಿಗೆ ಕರೆ ತರಲು ಕಾಂಗ್ರೆಸ್ 2 ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ ಯು.ಬಿ.ಶೆಟ್ಟಿ ಹೆಸರಿನಲ್ಲಿ ಹೆಲಿಕಾಪ್ಟರ್ ಬುಕ್ ಮಾಡಲಾಗಿದೆ. ಶೆಟ್ಟರ್ ಜೊತೆಗೆ ಕೆಲ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರೂ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಮಧ್ಯಾಹ್ನದ ಬಳಿಕ ಶೆಟ್ಟರ್ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.