
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್, ಈಗ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.
ಅವರನ್ನು ಮಣಿಸಲು ಬಿಜೆಪಿ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಹೀಗಾಗಿ ಜಗದೀಶ್ ಶೆಟ್ಟರ್, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಅವರನ್ನು ನಾವ್ಯಾಕೆ ಟಾರ್ಗೆಟ್ ಮಾಡಬೇಕು ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಬಿಜೆಪಿಯಲ್ಲೇ ಇರುವಂತೆ ನಾನು ಪ್ರೀತಿಯಿಂದ ಕರೆದೆ. ಆದರೆ ಅವರು ಅಲ್ಲೇ ಸಾಯುತ್ತೇನೆ ಎಂದು ಹೋಗಿದ್ದಾರೆ. ಶೆಟ್ಟರ್ ಅವರಿಗೆ ಸೊಕ್ಕು ಬಂದಿದ್ದು ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿ ಕಾರಿದ್ದಾರೆ.