alex Certify BIG NEWS: ಜನರನ್ನು ಗೊಂದಲಕ್ಕೆ ದೂಡಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನರನ್ನು ಗೊಂದಲಕ್ಕೆ ದೂಡಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬಂದಾಗ ರಾಜ್ಯಕ್ಕೆ ಬರುತ್ತಾರೆ. ಬಳಿಕ ಹೋಗುತ್ತಾರೆ. ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಮಾಜದಲ್ಲಿ ಶಾಂತಿ, ನೆಮ್ಮದಿ ತರಲು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ನ್ಯಾಯ ಒದಗಿಸಲು, ಸುಭದ್ರ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ವಾಗ್ದಾನದೊಂದಿಗೆ ಕಾಂಗ್ರೆಸ್ ಜನವರಿ 11 ಬೆಳಗಾವಿ ವೀರಸೌಧದಿಂದ ಯಾತ್ರೆ ಆರಂಭಿಸಲಿದೆ ಎಂದು ಹೆಳಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರು ಸ್ಪಷ್ಟನೆ ನೀಡಲಿ. ರಾಜ್ಯದಲ್ಲಿ ಮೀಸಲಾತಿ ಹೆಸರಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಮೀಸಲಾತಿ ನೀಡದೇ ಮೀಸಲಾತಿ ವಿಚಾರ ನ್ಯಾಯಾಲಯದ ಮೆಟ್ಟಿಲೇರಿ ಅಲ್ಲಿ ಬಾಕಿ ಉಳಿಯುವಂತೆ ಮಾಡುತ್ತಿದ್ದಾರೆ. ಅನಗತ್ಯವಾಗಿ ವಿವಾದಗಳಿಗೆ ಬಿಜೆಪಿಯವರು ದಾರಿ ಮಾಡಿಕೊಡುತಿದ್ದಾರೆ. ಯಾವ ವಿಚಾರದಲ್ಲಿಯೂ ಸ್ಪಷ್ಟ ನಿರ್ಧಾರ ಪ್ರಕಟಿಸದೇ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಬೊಮ್ಮಾಯಿ ಪಂಚಮಸಾಲಿಗಳು, ಒಕ್ಕಲಿಗರು, ಪರಿಶಿಷ್ಟರ ಬೇಡಿಕೆ ಬಗ್ಗೆ ಸಂವಿಧಾನದಲ್ಲಿ ತಿದ್ದುಪಡಿ ತಂದು ಇಷ್ಟು ಪ್ರಮಾಣದ ಮೀಸಲಾತಿ ತರಲು ಮುಂದಾಗಿದ್ದೇವೆ ಎಂದು ಹೇಳಿಕೆ ನೀಡದೇ ಎಲ್ಲರನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ.ಎಲ್ಲ ಸಮಾಜಕ್ಕೂ ಅನ್ಯಾಯಮಾಡುತ್ತಿದ್ದಾರೆ ಎಂದರು.

ಇನ್ನು ಗಡಿ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯದೇ ಅವರೇ ನಿರ‍್ಣಯ ತೆಗೆದುಕೊಂಡಿದ್ದಾರೆ. ಒಂದು ರೀತಿ ಒಳ್ಳೆಯದಾಯಿತು. ಇಂತಹ ವಿಚಾರದಲ್ಲಿ ಈ ರೀತಿ ತೀರ್ಮಾನ ಮಾಡಲು, ಅವರು ಹೇಳಿದ್ದನ್ನು ಕೇಳಿಕೊಂಡು ಬರಲು ನಾವು ಸಭೆಗೆ ಹೋಗಬೇಕಿತ್ತಾ? ಗಡಿ ವಿವಾದ, ಉತ್ತರ ಕರ್ನಾಟಕ ಭಾಗದ ಸಮಸ್ಯೆ, ಮೀಸಲಾತಿ ವಿಚಾರ ಯಾವುದನ್ನೂ ಚರ್ಚಿಸಲು ಸದನದಲ್ಲಿಯೂ ಅವಕಾಶ ಕೊಡಲಿಲ್ಲ. ಸರ್ವಪಕ್ಷ ಸಭೆಯಲ್ಲಿಯೂ ಇದನ್ನೇ ಮಾಡುತ್ತಿದ್ದರು ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...