ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲಿಯೇ ಕೊಲೆಗಡುಕರನ್ನು ಬಂಧಿಸಲಾಗುವುದು ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸುರತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲೋಕ್ ಕುಮಾರ್, ಫಾಜಿಲ್ ಹತ್ಯೆ ಪ್ರಕರಣ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎರಡೂ ಕೇಸ್ ನಲ್ಲಿಯೂ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ತನಿಖೆ ನಡೆಸಲಾಗಿದೆ. ಕಮಿಷನರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ. ಫಾಜಿಲ್ ಹತ್ಯೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಪೊಲೀಸರು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ಜನರು ಪೊಲೀಸ್ ಇಲಾಖೆ ಮೇಲೆ ನಂಬಿಕೆ ಇಡಬೇಕು ಎಂದರು.
ಜನರ ಜೀವ ರಕ್ಷಣೆ, ಆಸ್ತಿ ಪಾಸ್ತಿ ರಕ್ಷಣೆ ನಮ್ಮ ಹೊಣೆ. ಪೊಲೀಸ್ ಇಲಾಖೆ ಮೇಲೆ ಸಂಪೂರ್ಣ ಭರವಸೆ ಇಡಿ. ಯಾರೂ ಕೂಡ ಪ್ರಚೋದನಕಾರಿ ಹೇಳಿಕೆ ನೀಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು ಇಂತಹ ಕೆಲಸ ಮಾಡಬಾರದು. ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಬೇಕು. ಹತ್ಯೆ ಹಿಂದೆ ಬೇರೆ ಬೇರೆ ವಿಚಾರಗಳು ಇರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಹೆಳಿದರು.