alex Certify BIG NEWS: ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಕುಟುಂಬ ನಿರ್ವಹಣೆಗೂ ಮಹಿಳೆಯರು ಪರದಾಡುವ ಸ್ಥಿತಿ; ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಕುಟುಂಬ ನಿರ್ವಹಣೆಗೂ ಮಹಿಳೆಯರು ಪರದಾಡುವ ಸ್ಥಿತಿ; ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ದೇಶಕ್ಕೆ ಇಂದಿರಾ ಗಾಂಧಿ ಅವರ ಕೊಡುಗೆ ಅಪಾರ. ಮಹಿಳೆಯರಿಗೆ, ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದರು. ಇಂದು ರಾಜ್ಯ ಹಾಗೂ ಕೇಂದ್ರ ಎರಡರಲ್ಲಿಯೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ತತ್ತರಿಸಿದ್ದಾರೆ. ಕುಟುಂಬ ನಿರ್ವಹಣೆಗೆ ಮಹಿಳೆಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರಿಗಾಗಿ ಬಿಜೆಪಿ ಸರ್ಕಾರ ಯಾವುದೇ ಒಂದು ಯೋಜಯನ್ನು ಜಾರಿಗೆ ತರದಿರುವುದು ಮಹಿಳೆಯರ ಬಗೆಗಿನ ಬಿಜೆಪಿ ಧೋರಣೆ ಸಾಬೀತಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ʼನಾ ನಾಯಕಿʼ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ರಾಜ್ಯ ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ, ಹಗರಣಗಳು ನಡೆಯುತ್ತಿರುವ ಬಗ್ಗೆ ಕೇಳಿದ್ದೇನೆ. ಪಿಎಸ್ಐ ನೇಮಕಾತಿ, ಶಿಕ್ಷಕರ ನೇಮಕಾತಿ, ಕೋವಿಡ್ ವೇಳೆ ಔಷಧಗಳಲ್ಲಿಯೂ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿಯಿದೆ. ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿದೆ. ಜನರ ಸಮಸ್ಯೆ ಬಗೆಹರಿಸುವಲ್ಲಿ, ಯುವಕರಿಗೆ ಉದ್ಯೋಗ ನೀಡುವಲ್ಲಿ, ಅಗತ್ಯ ವಸ್ತುಗಳ ಬೆಲೆ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಿಳೆಯರು, ರೈತರು, ಬಡವರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕಾದ ಕಾಲ ಬಂದಿದೆ. ನಿಮ್ಮ ಅಸ್ತಿತ್ವಕ್ಕಾಗಿ ಜಾಗೃತರಾಗಬೇಕಾದ ಅಗತ್ಯವಿದೆ. ಮಹಿಳಾಪರ ಯೋಜನೆಗಳನ್ನು ಜಾರಿಗೆ ತರಲು, ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...