ನವದೆಹಲಿ: ಬಜೆಟ್ ನಲ್ಲಿ ಎಲ್ಲಾ ವಲಯಗಳಿಗೆ ಆದ್ಯತೆ ನೀಡಲಾಗಿದೆ. ಮುಂದಿನ 100 ವರ್ಷ ಗುರಿಯಾಗಿಸಿ ಬಜೆಟ್ ಮಂಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಡವರ ಏಳಿಗೆ ಬಜೆಟ್ ಮೂಲ ಉದ್ದೇಶ. ಎಲ್ಲಾ ವಲಯಗಳಿಗೂ ಆದ್ಯತೆ ನೀಡಲಾಗಿದೆ. ಉದ್ಯೋಗ, ಮೂಲಸೌಕರ್ಯ ಅಭಿವೃದ್ಧಿಯ ಬಜೆಟ್ ಇದಾಗಿದೆ. ಕೃಷಿ ವಲಯಕ್ಕೆ, ರೈತರ ಆದಾಯ ದ್ವಿಗುಣಕ್ಕೆ ಯೋಜನೆ ರೂಪಿಸಲಾಗಿದೆ. ಬಜೆಟ್ ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಆದ್ಯತೆ ನಿಡಲಾಗಿದೆ ಎಂದರು.
ಬಜೆಟ್ ಬಗ್ಗೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಜನರ ಪ್ರತಿಕ್ರಿಯೆಯಿಂದ ಸೇವೆ ಮಾಡಲು ಇನ್ನಷ್ಟು ಹುಮ್ಮಸ್ಸು ಬಂದಿದೆ. ಜನಸ್ನೇಹಿ, ಅಭಿವೃದ್ಧಿಪರ ಬಜೆಟ್ ಮಂಡಿಸಿದ್ದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ನಾಳೆ ಬೆಳಿಗ್ಗೆ 11 ಗಂಟೆಗೆ ಬಜೆಟ್ ಬಗ್ಗೆ ವಿಸ್ತೃತವಾಗಿ ವಿವರಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.