ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ನಿರ್ಲಕ್ಷ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಗಣಿಧಣಿ ಪರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯಲ್ಲಿಯೇ ಜನಾರ್ಧನ ರೆಡ್ಡಿಯನ್ನು ಉಳಿಸಿಕೊಳ್ಳುತ್ತೇವೆ. ಅವರನ್ನು ಕಡೆಗಣಿಸುವ ಮಾತೇ ಇಲ್ಲ. ಜನಾರ್ಧನ ರೆಡ್ಡಿ ಜೊತೆ ನಾನು ಮಾತನಾಡಿದ್ದೇನೆ ಎಂದು ಹೇಳಿದರು.
ಗಂಗಾವತಿಯಲ್ಲಿ ರೆಡ್ಡಿ ಮನೆ ಮಾಡಿದ್ದರಿಂದ ಗೊಂದಲವಾಗಿದೆ. ಜನಾರ್ಧನ ರೆಡ್ಡಿ ಜೊತೆ ಚರ್ಚೆ ನಡೆಸಲಾಗಿದೆ. ಜನಾರ್ಧನ ರೆಡ್ದಿ ಸ್ಪರ್ಧೆಯನ್ನು ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿದರು.
ಈ ಮೂಲಕ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದ ಜನಾರ್ಧನ ರೆಡ್ಡಿಯನ್ನು ಸಮಾಧಾನಪಡಿಸುವ ಯತ್ನ ನಡೆಸಿರುವ ಬಿಜೆಪಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ಟಿಕೆಟ್ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.