BIG NEWS: ಜನ ಕಾಂಗ್ರೆಸ್ ಪಕ್ಷವನ್ನೇ ಬ್ಯಾನ್ ಮಾಡಲಿದ್ದಾರೆ; ಸಿ.ಟಿ. ರವಿ ಗುಡುಗು

ಚಿಕ್ಕಮಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಹೇಳಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು, ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಕಿಡಿ ಕಾರಿರುವ ಸಿ.ಟಿ.ರವಿ, ಬಜರಂಗದ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ನವರು ಹೇಳಿದ್ದಾರೆ. ರಾಷ್ಟ್ರ ಭಕ್ತರಿಗೂ ತಾಲಿಬಾನಿಗಳಿಗೂ ವ್ಯತ್ಯಾಸ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಾಲಿಬಾನಿಗಳಿಗೂ, ರಾಷ್ಟ್ರಭಕ್ತರಿಗೂ ವ್ಯತ್ಯಾಸ ಗೊತ್ತಿಲ್ಲದ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ. ಭಯೋತ್ಪಾದಕರನ್ನು ದೇಶಭಕ್ತರನ್ನು ಒಂದೇ ತಕ್ಕಡಿಯಲ್ಲಿಟ್ಟು ನೋಡುವ ಕಾಂಗ್ರೆಸ್ ಪಕ್ಷದ ಮನಸ್ಥಿತಿಗೆ ನನ್ನ ಧಿಕ್ಕಾರ. ಇದು ಹನುಮನ ನಾಡು. ಹನಮನನ್ನು ಆರಾಧಿಸುವ ಬಜರಂಗದಳ ಬ್ಯಾನ್ ಮಾಡಲು ಹೊರಟಿದ್ದೀರಾ? ನಿಮ್ಮ ಆಟ ಇಲ್ಲಿ ನಡೆಯಲ್ಲ. ಜನ ಕಾಂಗ್ರೆಸ್ ನ್ನು ಬ್ಯಾನ್ ಮಾಡುತ್ತಾರೆ ಎಂದು ಗುಡುಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read