ಭೋಪಾಲ್: ಮಧ್ಯಪ್ರದೇಶದ ಜಬಲ್ ಪುರ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಜನರು ಸಜೀವ ದಹನಗೊಂಡಿದ್ದು ಹಲವರು ಗಭೀರವಾಗಿ ಗಾಯಗೊಂದಿದ್ದಾರೆ.
ಜಬಲ್ಪುರದ ನ್ಯೂ ಲೈಫ್ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೊಡುತ್ತಲೇ ಇಡೀ ಆಸ್ಪತ್ರೆ ಹೊತ್ತಿ ಉರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಜನ ರೋಗಿಗಳು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಲವರು ಗಾಯಗೊಂದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.