ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ.
ಜಮೀರ್ ಅಹ್ಮದ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ.
ಕೊರೊನಾ ಚಿಕಿತ್ಸೆಗಾಗಿ ಈ ಬ್ಯಾಂಕ್ ನೀಡ್ತಿದೆ 5 ಲಕ್ಷದವರೆಗೆ ಸಾಲ
ಜಾರಿ ನಿರ್ದೇಶನಾಲಯದಿಂದ ಬುಲಾವ್ ವಿಚಾರವಾಗಿಯೇ ನಿನ್ನೆ ಕೂಡ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಜಮೀರ್ ಅಹ್ಮದ್, ಚರ್ಚೆ ನಡೆಸಿದ್ದರು. ಇಡಿ ವಿಚಾರಣೆ ಎದುರಿಸುವ ನಿಟ್ಟಿನಲ್ಲಿ ಜಮೀರ್ ಚರ್ಚಿಸಿದ್ದಾರೆ ಎನ್ನಲಾಗಿದೆ. ಇದೀಗ ಇಡಿ ಬುಲಾವ್ ಬೆನ್ನಲ್ಲೇ ದೆಹಲಿಗೆ ತೆರಳಿದ್ದಾರೆ